ಕೆಜಿಎಫ್ ಮಾಜಿ ಶಾಸಕ ಎಂ. ಭಕ್ತವತ್ಸಲಂ ನಿಧನ

ಎಂ. ಭಕ್ತವತ್ಸಲಂ 1983ರಲ್ಲಿ ಎಐಎಡಿಎಂಕೆ ಪಕ್ಷದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು.

ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್‌ ಮೀಸಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಭಕ್ತವತ್ಸಲಂ (70) ಹೃದಯಾಘಾತದಿಂದ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.

ಕೆಜಿಎಫ್‌ನ ರಾಬರ್ಟ್‌ಸನ್‌ ಪೇಟೆಯಲ್ಲಿ ವಾಸವಿದ್ದ ಅವರಿಗೆ ಮನೆಯಲ್ಲಿ ರಾತ್ರಿ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿತ್ತು. ನಂತರ ಕುಟುಂಬ ಸದಸ್ಯರು ಅವರನ್ನು ಜಿಲ್ಲಾ ಕೇಂದ್ರದ ಆರ್‌.ಎಲ್‌. ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ರಾತ್ರಿ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಕೆಜಿಎಫ್‌ ನಗರಸಭಾ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ ಭಕ್ತವತ್ಸಲಂ 1983ರಲ್ಲಿ ಎಐಎಡಿಎಂಕೆ ಪಕ್ಷದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು. 1985ರ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಪುನಃ 1989ರಲ್ಲಿ ಎಐಎಡಿಎಂಕೆ ಪಕ್ಷದಿಂದ 2ನೇ ಬಾರಿಗೆ ಮತ್ತು 1999ರಲ್ಲಿ 3ನೇ ಬಾರಿಗೆ ಶಾಸಕರಾದರು. ಕ್ಷೇತ್ರ ಪುನರ್‌ ವಿಂಗಡಣೆ ಬಳಿಕ ಎಐಎಡಿಎಂಕೆ ತೊರೆದು ಜೆಡಿಎಸ್‌ ಸೇರಿದ ಅವರು 2008, 2013 ಹಾಗೂ 2018ರ ವಿಧಾನಸಭಾ ಚುನಾವಣೆಯಲ್ಲಿ ಸತತ ಸೋಲು ಕಂಡಿದ್ದರು.

The Ancient Times

Because we’re journalists, we’re impatient. We want to gather the news as quickly as possible, using any technological resource available. And when we’re as sure of the story as we can be, we want to share it immediately, in whatever way reaches the most people. The Internet didn’t plant these ideas in our heads. We’ve always been this way.

Leave a Reply